(ನ್ಯೂಸ್ ಕಡಬ) newskadaba.com ಮಾ. 18: ಸುಪ್ರೀಂ ಕೋರ್ಟ್‌ನ ಜಡ್ಜ್ ಆಗಿ ಜೊಯಮಲ್ಯ ಬಾಗ್ಚಿ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಅವರು 2031ರ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಲಿದ್ದಾರೆ.ಇದಕ್ಕೂ ಮೊದಲು ಕೋಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದ ಜೊಯಮಲ್ಯ ಬಾಗ್ಚಿ ಅವರನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಕ ಮಾಡುವಂತೆ ಮಾ.10 ರಂದು ಅನುಮೋದನೆ ನೀಡಿತ್ತು.
ಇಂದು ಸುಪ್ರೀಂ ಕೋರ್ಟ್ ಆವರಣದಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ ಖನ್ನಾ ಅವರು ನ್ಯಾಯಾಧೀಶ ಜೊಯಮಲ್ಯ ಬಾಗ್ಚಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.