(ನ್ಯೂಸ್ ಕಡಬ) newskadaba.com ಮಾ. 18 ಬೆಂಗಳೂರು: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ಸಂಬಂಧ ಕ್ರಮ ಕೈಗೊಳ್ಳುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದ ಶಾಸಕರ ತಂಡ ಸಚಿವರಿಗೆ ಮನವಿ ಸಲ್ಲಿಸಿದೆ.

ರಾಜ್ಯ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಈ ಕುರಿತು ಕ್ರಮ ಕೈಗೊಳ್ಳಲು ಸಂಬಂಧಿತರಿಗೆ ಸೂಚಿಸಿದ್ದಾಗಿ ಪ್ರಕಟಣೆ ತಿಳಿಸಿದೆ.