ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹೆಚ್.ಎಂ ರೇವಣ್ಣ ಹಲ್ಲೆ-ದೂರು ದಾಖಲು



(ನ್ಯೂಸ್ ಕಡಬ) newskadaba.com ಮಾ. 18 ಬೆಂಗಳೂರು: ಮಾಜಿ ಸಚಿವ ಹೆಚ್.ಎಂ.ರೇವಣ್ಣ ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪದ ಮೇರೆಗೆ ಬೆಂಗಳೂರಿನ ಹೈ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.







ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಕುಮಾರಕೃಪಾ ಅತಿಥಿಗೃಹದಲ್ಲಿ ಮಾರ್ಚ್ 17 ರಂದು ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ಆರೋಪಿಸಿದ್ದಾರೆ. ಈ ಸಂಬಂಧ ಹೆಚ್‌ಎಂ ರೇವಣ್ಣ ವಿರುದ್ಧ ಆಕೆ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು, ಸಾಕ್ಷ್ಯಧಾರಗಳನ್ನು ನೀಡುವಂತೆ ಕೈ ಕಾರ್ಯಕರ್ತೆಗೆ ನೋಟಿಸ್ ನೀಡಿದ್ದಾರೆ.






error: Content is protected !!
Scroll to Top