ಮಂಗಳೂರು: ಅಕ್ರಮ ಮರಳುಗಾರಿಕೆ ತಡೆಯಲು ಚಾಲಿತ ದಳ-ಮುಲ್ಲೈ ಮುಗಿಲನ್

(ನ್ಯೂಸ್ ಕಡಬ) newskadaba.com ಮಾ. 18 ಮಂಗಳೂರು: ಮಂಗಳೂರು ಉಪವಿಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ತಡೆಯಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಚಾಲಿತ ದಳವನ್ನು ರಚಿಸಿ ಆದೇಶ ನೀಡಿದ್ದಾರೆ.

ಅನಧಿಕೃತ ಮರಳುಗಾರಿಕೆ ಮತ್ತು ಸಾಗಣಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪಾಳಿಯಲ್ಲಿ ಕರ್ತವ್ಯ ಚಾಲಿತ ದಳವು ನಿರ್ವಹಿಸಲಿದ್ದಾರೆ. ಸರಕಾರದ ಆದೇಶವನ್ನು ಕಡೆಗಣಿಸಿ ರಾತ್ರಿ ವೇಳೆ ಅಕ್ರಮವಾಗಿ ಮರಳು ಗಣಿಗಾರಿಕೆ, ದಾಸ್ತಾನು ಮತ್ತು ಸಾಗಾಟ ನಡೆಯುತ್ತಿದೆ ಎಂಬ ಬಗ್ಗೆ ಸಾರ್ವಜನಿಕರಿಂದ ಹಲವು ದೂರುಗಳು ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರು ಅಕ್ರಮ ಗಣಿಗಾರಿಕೆಯನ್ನು ತಡೆಯಲು ತಂಡ ವನ್ನು ರಚಿಸಿದ್ದಾರೆ.

Also Read  ಆಲಂಕಾರು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಗರ್ಭಗುಡಿ ಮತ್ತು ನಮಸ್ಕಾರ ಮಂಟಪ ಪುನರ್ ನಿರ್ಮಾಣ ಕುರಿತು ಸಭೆ

error: Content is protected !!
Scroll to Top