ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಕೊಟ್ಟ ಮಾತನ್ನ ನಾವು ಈಡೇರಿಸಿದ್ದೇವೆ ಎಂದ ಟ್ರಂಪ್

(ನ್ಯೂಸ್ ಕಡಬ) newskadaba.com ಮಾ. 19 : ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಗಗನಯಾತ್ರಿ ಬುಚ್ ವಿಲ್ಮೋರ್ ಅವರು ಯಶಸ್ವಿಯಾಗಿ ಭೂಮಿಗೆ ಮರಳಿದ್ದಾರೆ. ಇದೀಗ ಕೊಟ್ಟ ಮಾತನ್ನು ನಾವು ಈಡೇರಿಸಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಸ್ಪೇಸ್‌ಎಕ್ಸ್‌ನ ಡ್ರ‍್ಯಾಗನ್ ಕ್ಯಾಪ್ಸುಲ್ ಮೂಲಕ ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆಗಿರುವ ಬಗ್ಗೆ ಮಾತನಾಡಿದ ಅವರು, ನಾನು ಅಧಿಕಾರಕ್ಕೆ ಬಂದಾಗ ಅವರನ್ನು ಮರಳಿ ಕರೆ ತರಬೇಕು ಎಂದು ಎಲಾನ್ ಮಸ್ಕ್​ಗೆ ಹೇಳಿದ್ದೆ, ಅದು ಬೈಡನ್‌ಗೆ ಸಾಧ್ಯವಾಗಿರಲಿಲ್ಲ, ಈಗ ಅವರು ಹಿಂದಿರುಗಿದ್ದಾರೆ. ಅವರು ಗುಣಮುಖರಾದ ಬಳಿಕ ಓವಲ್ ಕಚೇರಿಗೆ ಬರುತ್ತಾರೆ ಎಂದು ಹೇಳಿದ್ದಾರೆ.

Also Read  ಅಜಾನ್- ನಮಾಜ್ ವೇಳೆ ಪ್ರಾರ್ಥನಾ ಕೇಂದ್ರಗಳ ಮೈಕ್ ಬಂದ್ ಮಾಡುವಂತೆ ಬಾಂಗ್ಲಾ ಸರ್ಕಾರ ಆದೇಶ

error: Content is protected !!
Scroll to Top