(ನ್ಯೂಸ್ ಕಡಬ) newskadaba.com ಮಾ. 21 : ಹನಿ ಟ್ರ‍್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಆರಗ ಜ್ಞಾನೇಂದ್ರ, ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ ಟ್ರ‍್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದು ಈ ಬಗ್ಗೆ ಉತ್ತರಿಸಲು ಕೋರಿ ಇದಕ್ಕೆ ಕಾರಣರಾದವರನ್ನು ವಜಾ ಮಾಡಬೇಕು ಹಾಗೂ ಸದನದಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಿ ಸದನದ ಮೌಲ್ಯವನ್ನು ಎತ್ತಿಹಿಡಿಯಬೇಕೆಂದು ಹಾಗೂ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ಸಂದರ್ಭದಲ್ಲಿ ಸಿಎಂ ಮೇಲಿನಂತೆ ಉತ್ತರಿಸಿದರು.