(ನ್ಯೂಸ್ ಕಡಬ) newskadaba.com ಮಾ. 21 : ಬೆಂಗಳೂರು: ಮಾ. 22ರಂದು ಕನ್ನಡ ಪರ ಒಕ್ಕೂಟಗಳು ಕರೆ ಕೊಟ್ಟಿರುವ “ಕರ್ನಾಟಕ ಬಂದ್’ ಅನ್ನು ಯಾವುದೇ ಕಾರಣಕ್ಕೂ ಸರ್ಕಾರ ಬೆಂಬಲಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಸ್ಪಷ್ಟಪಡಿಸಿದರು.


ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾ.22 ರಂದು ನಡೆಯಲಿರುವ ಕರ್ನಾಟಕ ಬಂದ್ ನಿಂದ ವಿದ್ಯಾರ್ಥಿಗಳ ಪರೀಕ್ಷೆಗೆ ತೊಂದರೆಯಾಗುತ್ತದೆ ಎನ್ನುವ ವಿಚಾರವನ್ನು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಜನರು ಕಾನೂನು ಕೈಗೆತ್ತುಕೊಳ್ಳಬಾರದು. ಸರ್ಕಾರ ಅಥವಾ ನ್ಯಾಯಾಲಯ ಬಂದ್‌ಗಳನ್ನು ಪ್ರೋತ್ಸಾಹಿಸುವುದಿಲ್ಲ. ಬಂದ್ ಸರಿಯಾದ ವಿಧಾನವಲ್ಲ ಎಂದು ನಾವು ಪ್ರತಿಭಟನಾಕಾರರಿಗೆ ತಿಳಿಸುತ್ತೇವೆ. ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.