(ನ್ಯೂಸ್ ಕಡಬ) newskadaba.com ಮಾ. 21 : ಹನಿಟ್ರ‍್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರು ಇಂದು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್ ಯು.ಟಿ ಖಾದರ್ ಅವರ ಮೇಲೆ ಶಾಸಕರು ಪೇಪರ್ ಎಸೆದಿದ್ದಾರೆ.


ಇಂದು ವಿಧಾನಸಭೆಯ ಅಧಿವೇಶನದ ಕೊನೆಯ ದಿನವಾದ ಕಾರಣ ಬೆಳಗ್ಗೆ ವಿಧಾನಸಭೆ ಆರಂಭಗೊಳ್ಳುತ್ತಿದ್ದಂತೆ ಅಶೋಕ್ ಮತ್ತು ಸುನಿಲ್ ಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸರ್ಕಾರದ ಸಚಿವರೇ ತನ್ನ ಮೇಲೆ ಹನಿಟ್ರ‍್ಯಾಪ್ ನಡೆದಿದೆ ಎಂದು ಆರೋಪಿಸಿದ್ದಾರೆ. ಆದರೆ ಸರ್ಕಾರ ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಜಡ್ಜ್ಗಳ ಮೇಲೆ ಹನಿಟ್ರ‍್ಯಾಪ್ ನಡೆದಿದೆ ಎಂದು ರಾಜಣ್ಣ ಹೇಳಿದ್ದಾರೆ. ಹೀಗಾಗಿ ಸರ್ಕಾರ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ವಿಪಕ್ಷಗಳ ಆಗ್ರಹಕ್ಕೆ ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಅವರು ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿ ಉನ್ನತ ಮಟ್ಟದ ತನಿಖೆ ನಡೆಸುತ್ತೇವೆ ಎಂದು ಹೇಳಿದರು.