ಮಣಿಪುರದಲ್ಲಿ ನಿಷೇಧಿತ ಕಾಂಗ್ಲಿಪಾಕ್ ಉಗ್ರರ ಸೆರೆ

crime, arrest, suspected

(ನ್ಯೂಸ್ ಕಡಬ) newskadaba.com ಮಾ. 21 : ಬೆಂಗಳೂರು: ಮಣಿಪುರದ ಪಶ್ಚಿಮ ಜಿಲ್ಲೆಯಲ್ಲಿ ನಿಷೇಧಿತ ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಕ್ಷದ (ಎಂಎಫ್ ಎಲ್) ಮೂವರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಅಹೀಬಾಮ್ ಗಾಂಧಿ (35), ದೊಂಗಮ್ ನೌಬಾ ಮೈಟಿ (21) ಮತ್ತು ನಿಂಗೌಬಾ ಮೊಮೊಚಾ ಸಿಂಗ್ ಎಂದು ಗುರುತಿಸಲಾಗಿದೆ.

ಅಪಹರಣ ಪ್ರಕರಣದಲ್ಲಿ ಉಗ್ರರು ನಮಗೆ ಬೇಕಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ ನಾಲ್ಕು ಚಕ್ರದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೊಂದೆಡೆ, ಕಳೆದ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.

Scroll to Top