(ನ್ಯೂಸ್ ಕಡಬ) newskadaba.com ಮಾ. 22 ಬೆಂಗಳೂರು: ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ಮಾಡಿರುವುದು ಸೇರಿದಂತೆ ವಿವಿಧ ಘಟನೆಗಳನ್ನು ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದ ಗುಂಪು ಶನಿವಾರ ‘ಕರ್ನಾಟಕ ಬಂದ್’ಗೆ ಕರೆ ನೀಡಿವೆ.
ಬಂದ್‌ಗೆ ಓಲಾ ಉಬರ್ ಡ್ರೈವರ್ಸ್ ಅಂಡ್ ಓನರ್ಸ್ ಅಸೋಸಿಯೇಷನ್, ಆಟೊ ರಿಕ್ಷಾ ಸಂಘಟನೆಗಳು ಬೆಂಬಲ ನೀಡಿದ್ದರೆ, ಕೆಎಸ್‌ಆರ್‌ಟಿಸಿ, ಮೆಟ್ರೊ ಬೆಂಬಲ ನೀಡಿಲ್ಲ. ಹೋಟೆಲ್ ಮಾಲೀಕರು ನೈತಿಕ ಬೆಂಬಲ ಮಾತ್ರ ನೀಡಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು ಬೆಳಗ್ಗೆ ಬೆಂಗಳೂರಿನ ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಮೆರವಣಿಗೆ ಹಮ್ಮಿಕೊಂಡಿವೆ. ಬೆಳಗಾವಿ, ಮಂಡ್ಯ, ರಾಮನಗರದಲ್ಲಿ ಸಂಪೂರ್ಣ ಬೆಂಬಲ ಸಿಕ್ಕಿದೆ. ಮೈಸೂರು, ಕಲ್ಯಾಣ ಕರ್ನಾಟಕದಲ್ಲಿ ಮಿಶ್ರ ಬೆಂಬಲ ಇದೆ. ಕರಾವಳಿ ಕರ್ನಾಟಕದಲ್ಲಿ ಬಂದ್‌ಗೆ ಯಾವುದೇ ಸಂಘಟನೆ ಕರೆ ನೀಡಿಲ್ಲ.