(ನ್ಯೂಸ್ ಕಡಬ) newskadaba.com ಮಾ. 22 ಬೆಂಗಳೂರು: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭೆ ಕಲಾಪದಿಂದ 6 ತಿಂಗಳುಗಳ ಕಾಲ ಅಮಾನತು ಮಾಡಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ.


ದೊಡ್ಡಣ್ಣ ಗೌಡ ಪಾಟೀಲ್, ಸಿ.ಕೆ.ರಾಮಮೂರ್ತಿ, ಅಶ್ವತ್ಥ ನಾರಾಯಣ, ಎಸ್.ಆರ್.ವಿಶ್ವನಾಥ್, ಬೈರತಿ ಬಸವರಾಜ, ಎಂ ಆರ್ ಪಾಟೀಲ್, ಚನ್ನಬಸಪ್ಪ, ಬಿ ಸುರೇಶ್ ಗೌಡ, ಉಮನಾಥ್ ಕೋಟ್ಯಾನ್, ಶರಣು ಸಲಗಾರ್, ಶೈಲೇಂದ್ರ ಬೆಲ್ದಾಳೆ, ಯಶಪಾಲ್ ಸುವರ್ಣ, ಹರೀಶ್ ಬಿಪಿ, ಡಾ. ಭರತ್ ಶೆಟ್ಟಿ, ಮುನಿರತ್ನ, ಬಸವರಾಜ ಮತ್ತಿಮೋಡ್, ಧೀರಜ್ ಮುನಿರಾಜು, ಡಾ ಚಂದ್ರು ಲಮಾಣಿ ಅವರನ್ನು ಕಲಾಪದಿಂದ ಅಮಾನತು ಮಾಡಲಾಗಿದೆ.