ಕೇವಲ 40 ಅಲ್ಲ 400 ಜನರಿಗೆ ಹನಿಟ್ರ್ಯಾಪ್: ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

(ನ್ಯೂಸ್ ಕಡಬ) newskadaba.com ಮಾ. 22 ಬೆಳಗಾವಿ: ರಾಜ್ಯದಲ್ಲಿ ಕೇವಲ 40 ನಾಯಕರಲ್ಲ, ಕನಿಷ್ಠ 400 ಜನರನ್ನೂ ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ರಾಜ್ಯದಿಂದ ಮಾತ್ರವಲ್ಲ, ದೆಹಲಿಯ ಅನೇಕ ನಾಯಕರು ಮತ್ತು ಅಧಿಕಾರಿಗಳನ್ನು ಕೂಡ ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಅವರು ಹೇಳಿದರು. ಸರ್ಕಾರ ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಎಲ್ಲಾ ಪಕ್ಷಗಳ ನಾಯಕರನ್ನು ಇದರಲ್ಲಿ ಸಿಲುಕಿಸಲಾಗಿದೆ. ಹನಿಟ್ರ್ಯಾಪ್ ಮಾಡುವ ಪ್ರಯತ್ನಗಳ ವಿರುದ್ಧ ದೂರು ದಾಖಲಿಸುವಂತೆ ಸಚಿವ ರಾಜಣ್ಣ ಅವರಿಗೆ ನಾನೇ ಹೇಳಿದ್ದೆ ಎಂದು ತಿಳಿಸಿದರು. ಹನಿಟ್ರ್ಯಾಪ್ ಮಾಡಿ ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕಿರುವ ನಿದರ್ಶನಗಳು ಈ ಹಿಂದೆಯೂ ನಡೆದಿವೆ ಎಂದು ಅವರು ಹೇಳಿದರು. ತಮ್ಮ ಕೆಲಸ ಸಾಧಿಸಲು ಹನಿಟ್ರ್ಯಾಪ್ ಮಾಡಿ ಅಧಿಕಾರಿಗಳನ್ನು ಅವರು ಬ್ಲ್ಯಾಕ್‌ಮೇಲ್ ಮಾಡುತ್ತಾರೆ ಎಂದು ಅವರು ಹೇಳಿದರು.

error: Content is protected !!
Scroll to Top