(ನ್ಯೂಸ್ ಕಡಬ) newskadaba.com ಮಾ. 22: ಕನ್ನಡಿಗರಿಗಾಗಿ ಕರೆದ ಬಂದ್ ಇಡೀ ರಾಜ್ಯಾದ್ಯಂತ ಬಂದ್ ಯಶಸ್ವಿಯಾಗಿದೆ. ಇದಕ್ಕೆ ಹೋರಾಟ ಮಾಡಿದ ಸಂಘಟನೆಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಶಾಸಕ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಕರ್ನಾಟಕ ಬಂದ್ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಿಲ್ಲೆಗಳಲ್ಲಿ ಬಂದ್ ಅವರದ್ದೇ ರೂಪದಲ್ಲಿ ನಡೆದಿದೆ. ಕೆಲವು ಕಡೆ ಬಸ್ ಓಡಾಡುತ್ತಿದ್ದಾವೆ, ಜನ ಇಲ್ಲ. ಬಸ್ ನಿಲ್ದಾಣದಲ್ಲಿ ಜನ ಇಲ್ಲ. ಬಂದ್‌ನ ಬೇಡಿಕೆ ಎಲ್ಲವನ್ನೂ ಜನರ ಮುಂದೆ ಸರ್ಕಾರದ ಮುಂದೆ ಇಟ್ಟಿದ್ದೇವೆ ಎಂದು ತಿಳಿಸಿದರು.