ವಿಧಾನಸಭೆಯಲ್ಲಿ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ 4% ಮೀಸಲಾತಿ ಕೊಡುವ ಬಿಲ್‌ ಪಾಸ್

(ನ್ಯೂಸ್ ಕಡಬ) newskadaba.com ಮಾ. 22:  ಸದನದಲ್ಲಿ ವಿಪಕ್ಷಗಳ ಗದ್ದಲದ ನಡುವೆ ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ಮೀಸಲಾತಿ‌ ನೀಡುವ ‘ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ (ತಿದ್ದುಪಡಿ) ವಿಧೇಯಕ 2025’ ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಬಿಲ್‌ ಪಾಸ್‌ ಮಾಡಿದೆ.

ಈಗಾಗಲೇ ಬಜೆಟ್‌ನಲ್ಲಿ ಗುತ್ತಿಗೆ ಮೀಸಲಾತಿಯನ್ನು ಎಸ್‌ಸಿ-ಎಸ್‌ಟಿ, ಪ್ರವರ್ಗ 1, 2aಗಳ ಜೊತೆಗೆ 2b ಮುಸ್ಲಿಂ ವರ್ಗವನ್ನೂ ಸೇರಿಸಿ ಗುತ್ತಿಗೆ ಮೊತ್ತವನ್ನು 1 ಕೋಟಿಯಿಂದ 2 ಕೋಟಿ ರೂಗೆ ಏರಿಸುವ ಪ್ರಸ್ತಾಪ ಮಾಡಲಾಗಿತ್ತು. ಇಂದು ಮಂಡನೆಯಾದ ಬಿಲ್‌ನಲ್ಲಿ 2b ವರ್ಗಕ್ಕೆ ಶೇ.4 ಮೀಸಲಾತಿ ಕೊಡಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (KTTP) ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ರೆ ಎರಡು ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ಸಿಗಲಿದೆ.

error: Content is protected !!
Scroll to Top