(ನ್ಯೂಸ್ ಕಡಬ) newskadaba.com ಮಾ. 22: ಕೇರಳದ ವಿವಿಧ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಪಾಲಕ್ಕಾಡ್, ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಹಳದಿ ಎಚ್ಚರಿಕೆ. ಪ್ರತ್ಯೇಕ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. 24 ಗಂಟೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆಯಾಗಿದ್ದರೆ ಅದನ್ನು ಭಾರೀ ಮಳೆ ಸಾಧ್ಯತೆ ಇದೆ ಎನ್ನಲಾಗ್ತಿದೆ.



ಮುಂದಿನ 3 ಗಂಟೆಗಳಲ್ಲಿ ಕೇರಳದ ಕೊಲ್ಲಂ ಜಿಲ್ಲೆಯ ಕೆಲ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಮತ್ತು ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಇಂದು ಮೀನುಗಾರಿಕೆಗೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಕೇಂದ್ರ ಹವಾಮಾನ ಇಲಾಖೆ ಪ್ರಕಟಿಸಿದೆ.