(ನ್ಯೂಸ್ ಕಡಬ) newskadaba.com, ಮಾ. 24: ವಿನಯ್ ಗೌಡ ಹಾಗೂ ರಜತ್ ಕಿಶನ್ ಇತ್ತೀಚೆಗೆ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಇದೀಗ ಇದೇ ಕಾರಣಕ್ಕಾಗಿ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.


ರಜತ್ ಕಿಶನ್ ಜೊತೆ ನಟ ವಿನಯ್ ಗೌಡ ಒಂದು ಮಸ್ತ್ ರೀಲ್ಸ್ ಮಾಡಿದ್ದಾರೆ. ಈ ರೀಲ್ಸ್‌ನಲ್ಲಿ ವಿನಯ್ ಗೌಡ ಲಾಂಗು ಹಿಡಿದು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ದರ್ಶನ್ ಅವರ ‘ಕರಿಯ’ ಸಿನಿಮಾದ ಸ್ಟೈಲ್‌ನಲ್ಲಿ ಸ್ಲೋ ಮೋಷನ್‌ನಲ್ಲಿ ನಡೆಯುತ್ತಿರುತ್ತಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆದ ಬೆನ್ನಲ್ಲೇ ರಜತ್, ವಿನಯ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ