(ನ್ಯೂಸ್ ಕಡಬ) newskadaba.com, ಮಾ. 24 ನವದೆಹಲಿ: ಮನೆಯಲ್ಲಿ ಸುಟ್ಟ ಸ್ಥಿತಿಯಲ್ಲಿ 15 ಕೋಟಿ ರೂ.ಗಳ ನೋಟಿನ ಕಂತೆಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಮುಂದಿನ ಆದೇಶದವರೆಗೆ ಯಶವಂತ್ ವರ್ಮಾ ಅವರನ್ನು ತಕ್ಷಣದಿಂದಲೇ ಕರ್ತವ್ಯದಿಂದ ವಜಾಗೊಳಿಸಿ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಆದೇಶ ಹೊರಡಿಸಿದ್ದಾರೆ. ಇದಕ್ಕೂ ಮುನ್ನ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆಗಾಗಿ ಪಂಜಾಬ್, ಹರಿಯಾಣ ಮತ್ತು ಕರ್ನಾಟಕ ಹೈಕೋರ್ಟ್‌ಗಳ ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸಿದೆ.


ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಬೆಂಕಿ ನಂದಿಸುವಾಗ ಹಣದ ರಾಶಿ ಪತ್ತೆಯಾಗಿತ್ತು. ಇದು ಇಡೀ ದೇಶವನ್ನೇ ನಲುಗಿಸಿತ್ತು. ಇದೀಗ ಭಾರೀ ಸಂಚಲನ ಮೂಡಿಸಿರುವ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತ್ ವರ್ಮಾ ಅವರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ.