ಅಕ್ರಮ ಮರಳು ಅಡ್ಡೆಗೆ ದಾಳಿ ► ಯಾಂತ್ರೀಕೃತ ದೋಣಿ ಸಹಿತ 10 ಲಕ್ಷ ರೂ. ಮೌಲ್ಯದ ಸ್ವತ್ತು ವಶ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ.30. ಅಕ್ರಮ ಮರಳುಗಾರಿಕೆ ಅಡ್ಡೆಯೊಂದಕ್ಕೆ ದಾಳಿ ನಡೆಸಿರುವ ಬಂಟ್ವಾಳ ಪೊಲೀಸರು ಯಾಂತ್ರೀಕೃತ ದೋಣಿ ಸಹಿತ ಲಕ್ಷಾಂತರ ರೂ. ಮೌಲ್ಯದ ಮರಳನ್ನು ವಶಪಡಿಸಿಕೊಂಡ ಘಟನೆ ಸಜೀಪ ಮುನ್ನೂರು ಗ್ರಾಮದ ಕೊಪ್ಪಳ ಎಂಬಲ್ಲಿ ಶುಕ್ರವಾರದಂದು ನಡೆದಿದೆ.

ಸಜೀಪ ಮುನ್ನೂರು ಗ್ರಾಮದ ಕೊಪ್ಪಳ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ನದಿ ತೀರದಲ್ಲಿ ದಾಸ್ತಾನು ಇರಿಸಲಾಗಿದ್ದ ಮರಳು, ಯಾಂತ್ರೀಕೃತ ದೋಣಿ ಹಾಗೂ ಲಾರಿ ಸೇರಿದಂತೆ ಹಲವು ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 10 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಜಿಲ್ಲಾ ಎಸ್ಪಿ ಡಾ| ರವಿಕಾಂತೇಗೌಡ ಮಾರ್ಗದರ್ಶನದಲ್ಲಿ ಬಂಟ್ವಾಳ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಅಕ್ಷಯ್ ಹಾಗೂ ಬಂಟ್ವಾಳ ತಹಶೀಲ್ದಾರ್ ಜೀನ್ ಮೇರಿ ತೌರೋ ನೇತೃತ್ವದಲ್ಲಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.

Also Read  ಮಂಗಳೂರು: ಆ. 01ರಿಂದ ಮೀನುಗಾರಿಕೆ ಮರು ಆರಂಭ

error: Content is protected !!
Scroll to Top