(ನ್ಯೂಸ್ ಕಡಬ) newskadaba.com, ಮಾ. 24: ವಿದ್ಯುತ್ ಸಂಗ್ರಹ ರಾಜ್ಯದಲ್ಲಿ ಚೆನ್ನಾಗಿ ಇದೆ. ರೈತರು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ, ಜನಕ್ಕೆ ಅನುಕೂಲ ರೀತಿಯಲ್ಲಿ ಕ್ರಮ ಕೈಗೊಂಡಿದ್ದೇವೆ ಎಂಬುದಾಗಿ ಕೆಪಿಟಿಸಿಎಲ್ ಎಂಡಿ ಪಂಕಜ್ ಕುಮಾರ್ ಪಾಂಡೆ ಹೇಳಿದ್ದಾರೆ.


ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಸಿಯಲ್ಲಿ ರಾಜ್ಯದ ಪ್ರಸ್ತುತ ವಿದ್ಯುತ್ ಪರಿಸ್ಥಿತಿ ಮತ್ತು ಇಂಧನ ಇಲಾಖೆಯ ಕಾರ್ಯ ಪ್ರಗತಿ, ಗ್ರ‍್ಯಾಚುಟಿ, ಪಿಂಚಣಿ ಹಣಕ್ಕಾಗಿ ವಿದ್ಯುತ್ ದರ ಏರಿಕೆ ಕುರಿತು ಚರ್ಚಿಸಲಾಯಿತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 6 ತಿಂಗಳಿಂದ ವಿದ್ಯುತ್ ಬಳಕೆ ಪ್ರಮಾಣ ಹೆಚ್ಚಾಗಿದೆ, ಗೃಹಬಳಕೆ ಹಾಗೂ ಕೈಗಾರಿಕೆಗಳಲ್ಲಿ ಎಸಿ ಬಳಕೆ ಹೆಚ್ಚಳವಾಗಿದೆ. ಇನ್ನೂ ಏಪ್ರಿಲ್ ತಿಂಗಳಲ್ಲಿ 18,500 ಮೆಗಾ ವ್ಯಾಟ್ ಬಳಕೆ ಹೆಚ್ಚಳವಾಗಲಿದ್ದು, ಪಂಜಾಬ್, ಯುಪಿಯಿಂದ ವಿದ್ಯುತ್ ಪಡೆಯುತ್ತಿದ್ದೇವೆ ಎಂದರು.