(ನ್ಯೂಸ್ ಕಡಬ) newskadaba.com, ಮಾ. 25: ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಜಾನ್ ಡೋ (ಅಶೋಕಕುಮಾರ್) ಆದೇಶ ಹೊರಡಿಸಿದೆ.


ಈ ಸಂಬಂಧ ಹಿರಿಯ ನ್ಯಾಯವಾದಿ ಎಸ್. ರಾಜಶೇಖರ್ ಹಿಳಿಯಾರು ವಾದ ಮಂಡಿಸಿದ್ದು, ದಾವೆಯನ್ನು ವಿಚಾರಣೆ ನಡೆಸಿದ ಸಿಸಿಎಚ್–11ನೇ ನ್ಯಾಯಾಲಯ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಮಾಧ್ಯಮಗಳ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಹಾಗೂ ಈಗಾಗಲೇ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ ಸೂಚಿಸಿದೆ