(ನ್ಯೂಸ್ ಕಡಬ) newskadaba.com , ಮಾ.28: ಶುಕ್ರವಾರ ಬೆಳಿಗ್ಗೆ ಮಧ್ಯ ಮಯನ್ಮಾರ್ ನಲ್ಲಿ 7.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮಧ್ಯಾಹ್ನ 12:30 ರ ಸುಮಾರಿಗೆ ಭೂಕಂಪ ಸಂಭವಿಸುತ್ತಿದ್ದಂತೆ ಕಟ್ಟಡಗಳಲ್ಲಿ ಎಚ್ಚರಿಕೆಯ ಶಬ್ದಗಳು ಮೊಳಗಿದವು. ಜನರಿಗೆ ಭೂ ಕಂಪನದ ಅನುಭವವಾಗುತ್ತಿದ್ದಂತೆ ಕಟ್ಟಡಗಳನ್ನು ಬಿಟ್ಟು ಹೊರಗೆ ಓಡಿ ಹೋಗಿದ್ದಾರೆ.


ಸದ್ಯ ಜನರು ಭಯಭೀತರಾಗಿ ಓಡಿ ಬಂದಿರುವ ದೃಶ್ಯ ಸಿಸಿಟವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾನಿ ಅಥವಾ ಸಾವುನೋವುಗಳ ಬಗ್ಗೆ ಯಾವುದೇ ವರದಿಯಾಗಿಲ್ಲ. ಮಯನ್ಮಾರ್ ಗಡಿ ದೇಶವಾಗಿರುವ ಭಾರತದ ನವದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಬೆಳಿಗ್ಗೆ 11.50 ರ ಸುಮಾರಿಗೆ ಭೂಮಿಯ 10 ಕಿ.ಮೀ ಆಳದಲ್ಲಿ ಈ ಭೂಕಂಪ ಸಂಭವಿಸಿದೆ.