(ನ್ಯೂಸ್ ಕಡಬ) newskadaba.com , ಏ.01: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆರಂಭವಾದ ಪ್ರತಿಭಟನೆ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮುಕ್ತಾಯಗೊಂಡಿತು. ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್, ಸಿಎಂಸಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ಸಚಿವ ಪ್ರಮೋದ್ ಶೆಟ್ಜ್ ಮಧ್ವರಾಜ್, ಬಿಜೆಪಿ ಮುಖಂಡರಾದ ಉ. ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲದೆ ರೇಷ್ಮಾ ಉದಯ ಕುಮಾರ್ ಶೆಟ್ಟಿ, ವೀಣಾ ಶೆಟ್ಟಿ, ಮತ್ತಿತರ ಮುಖಂಡರು ಉಪಸ್ಥಿತರಿದ್ದರು.