(ನ್ಯೂಸ್ ಕಡಬ) newskadaba.com , ಏ.01: ಬಂಗಾಳ ಕೊಲ್ಲಿಯಲ್ಲಿ ಮೇಲೆ ಸುಳಿಗಾಳಿ ಹಾಗೂ ಕರ್ನಾಟಕದ ಒಳನಾಡಿನಲ್ಲಿ ಟ್ರಫ್ ಉಂಟಾಗಿರುವ ಪರಿಣಾಮ ಏಪ್ರಿಲ್ ನಾಲ್ಕರವರೆಗೆ ಮಳೆಯಾಗುವ ಮುನ್ಸೂಚನೆಗಳಿವೆ.

ರಾಜ್ಯಾದ್ಯಂತ ಮಳೆ ಮುಂದುವರೆಯುವ ಲಕ್ಷಣಗಳಿದ್ದು, ಚದುರಿದಂತೆ ಹಗುರ ಮಳೆಯಾಗಲಿದೆ. ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಲಿದೆ, ಅಲ್ಲದೆ, ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.