(ನ್ಯೂಸ್ ಕಡಬ) newskadaba.com , ಏ.01: ಬೆಂಗಳೂರು: ರಾಜ್ಯದ ಜನರಿಗೆ ಬೆಲೆ ಏರಿಕೆಯ ಹೊರೆ ಹಾಕುವ ಮೂಲಕ ಬರೆ ಎಳೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ ವತಿಯಿಂದ ಎರಡು ಹಂತದಲ್ಲಿ ದೊಡ್ಡಮಟ್ಟದ ಹೋರಾಟಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದಿಲ್ಲಿ ತಿಳಿಸಿದರು.

ನಗರದ ಸಿದ್ದಗಂಗಾ ಮಠಕ್ಕೆ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೮ನೇ ಜಯಂತ್ಯೋತ್ಸವದ ಹಿನ್ನೆಲೆಯಲ್ಲಿ ಭೇಟಿ ನೀಡಿ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏ. ೨ ರಂದು ಫ್ರೀಡಂ ಪಾರ್ಕ್‌ನಲ್ಲಿ ಸರ್ಕಾರದ ವಿರುದ್ದ ಅಹೋರಾತ್ರಿ ಧರಣಿ ಹಾಗೂ ಏ. ೭ ರಂದು ಮೈಸೂರಿನಿಂದ ಜನಾಕ್ರೋಶ ಯಾತ್ರೆ ಕೈಗೊಳ್ಳುತ್ತಿರುವುದಾಗಿ ಹೇಳಿದರು.