ಗುಜರಾತ್‌ನ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ – 3 ಸಾವು, 6 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com , ಏ.01: ಬನಸ್ಕಂತ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ದೀಸಾ ಪಟ್ಟಣದ ಬಳಿಯ ಕಾರ್ಖಾನೆಯ ಕೆಲವು ಭಾಗಗಳು ಬೆಂಕಿಯ ಪರಿಣಾಮವಾಗಿ ಸರಣಿ ಸ್ಫೋಟಗಳು ಸಂಭವಿಸಿದ ನಂತರ ಕುಸಿದಿದ್ದು, ಹಲವಾರು ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಇನ್ಸ್‌ಪೆಕ್ಟರ್ ವಿಜಯ್ ಚೌಧರಿ ದೀಸಾ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ಕಟ್ಟಡದ ಅವಶೇಷಗಳಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ದೀಸಾ ಪುರಸಭೆಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮತ್ತು ಆರು ಮಂದಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ನಾಗರಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!
Scroll to Top