‘ಬಜೆಟ್‌ನಲ್ಲಿ ದಕ್ಷಿಣ ಕನ್ನಡ ,ಉಡುಪಿ ಜಿಲ್ಲೆಯನ್ನು ಸರ್ಕಾರ ಕಡೆಗಣಿಸಿದೆ’ – ಶಾಸಕ ಯಶ್‌ಪಾಲ್ ಸುವರ್ಣ

(ನ್ಯೂಸ್ ಕಡಬ) newskadaba.com , ಏ.02: ಉಡುಪಿ- ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸಂಪೂರ್ಣ ಉಡುಪಿ ಜಿಲ್ಲೆ ಇದೆಯೇ ಇಲ್ಲವೇ ಎಂಬ ರೀತಿಯಲ್ಲಿ ಬಜೆಟ್ ಮಂಡನೆ ಮಾಡಿದೆ. ಬಜೆಟ್ ನಲ್ಲಿ ದಕ್ಷಿಣ ಕನ್ನಡ ,ಉಡುಪಿ ಜಿಲ್ಲೆಯನ್ನು ಕಡೆಗಣಿಸಿದೆ. ಸಿದ್ದರಾಮಯ್ಯನವರಿಗೆ ಕರಾವಳಿಯ ಹಿಂದುತ್ವದ ದ್ವೇಷವೇ ಅಥವಾ ೭೫ ರ ಪ್ರಾಯ ದೋಷ ಎಂಬುದು ತಿಳಿದಿಲ್ಲ. ಉಡುಪಿ ಜಿಲ್ಲೆಯನ್ನು ಈಗ ಸಂಪೂರ್ಣ ಮರೆತುಬಿಟ್ಟಿದ್ದಾರೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದರು.


ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನಾ ಜಾಥಾ ಜಿಲ್ಲಾ ಬಿಜೆಪಿ ಕಚೇರಿಯಿಂದ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ವರೆಗೆ ನಡೆಯಿತು. ಬಳಿಕ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕರು ಸರ್ಕಾರದ ವಿರುದ್ಧ ಹರಿಹಾಯ್ದರು.

error: Content is protected !!
Scroll to Top