ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com , ಏ.02: ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಘೋರವಾದ ಅಪರಾಧ ಕೃತ್ಯ ಸಂಭವಿಸಿದೆ. ವ್ಯಕ್ತಿಯೊಬ್ಬ ನಾಡ ಬಂದೂಕಿನಿಂದ ಗುಂಡು ಹಾರಿಸಿ ಅತ್ತೆ, ನಾದಿನಿ ಹಾಗು ಮಗಳನ್ನು ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನು ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನ ಮಾಗಲು ಗ್ರಾಮದಲ್ಲಿ ನಡೆದಿದೆ. ಅತ್ತೆ ಜ್ಯೋತಿ ನಾದಿನಿ ಸಿಂಧು ಹಾಗು ಮಗಳು ಮೌಲ್ಯ ಎನ್ನುವವರನ್ನು ರತ್ನಾಕರ್ ಎನ್ನುವ ವ್ಯಕ್ತಿ ಭೀಕರವಾಗಿ ಕೊಲೆ ಮಾಡಿದ್ದಾನೆ.

ಮೂವರನ್ನು ಹತ್ಯೆ ಮಾಡಿದ ಬಳಿಕ ರತ್ನಾಕರ್ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ರತ್ನಾಕರ ಮನೆಯ ಹಿಂಭಾಗದ ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ದುರ್ಘಟನೆಯ ಹಿಂದಿರುವ ಕಾರಣಗಳನ್ನು ಪೊಲೀಸರು ಶೋಧಿಸುತ್ತಿದ್ದಾರೆ.

error: Content is protected !!
Scroll to Top