ಸಿಗದ ರಜೆ, ನೊಂದ ಕೆಎಸ್‌ಆರ್‌ಟಿಸಿ ಚಾಲಕ ಬಸ್‌ನಲ್ಲೇ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com , .02 ಬೆಳಗಾವಿ: ಬೆಳಗಾವಿಯಲ್ಲಿ ಘೋರ ಘಟನೆ ನಡೆದಿದೆ. ತಮ್ಮ ಮನೆಯಲ್ಲಿಯೇ ನಡೆಯುತ್ತಿರುವ ಮದುವೆಗೆ ತೆರಳಲೂ ಮೇಲಧಿಕಾರಿಗಳು ರಜೆ ಕೊಡಲಿಲ್ಲ ಎಂದು ತೀವ್ರವಾಗಿ ಮನನೊಂದ ಕೆಎಸ್ಆರ್ಟಿಸಿ ಚಾಲಕನೊಬ್ಬ ಬಸ್‌ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇಲ್ಲಿನ ಹಳೆ ಗಾಂಧಿ‌ನಗರದ ನಿವಾಸಿ ಬಾಲಚಂದ್ರ ಶಿವಪ್ಪ ಹುಕ್ಕೋಜಿ ಸಾವಿಗೆ ಶರಣಾದವರು. ಶಹಾಪುರ ನಾಕಾದಿಂದ ವಡಗಾವಿಗೆ ಸಂಚರಿಸುವ ಬಸ್ಸಿನಲ್ಲಿ ಅವರು ಚಾಲಕರಾಗಿದ್ದರು.

ಮನೆಯಲ್ಲಿ ಬಾಲಚಂದ್ರ ಅವರ ಅಕ್ಕನ ಮಗಳ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಕೆಲ ದಿನ ರಜೆ ಕೊಡುವಂತೆ ಡಿಪೊ‌ ಮ್ಯಾನೇಜರ್ ಬಳಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರು ರಜೆ ಕೊಡದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿದ್ದಾರೆ.

error: Content is protected !!
Scroll to Top