(ನ್ಯೂಸ್ ಕಡಬ) newskadaba.com , ಏ.02 ಹೊಸದಿಲ್ಲಿ: ಬಂಗಾರದ ದರ ಏ. 1ರಂದು ಹೊಸ ದಾಖಲೆಯ ಎತ್ತರಕ್ಕೇರಿದೆ. ಪ್ರತಿ 10 ಗ್ರಾಮ್ ಚಿನ್ನದ ದರ ಬರೋಬ್ಬರಿ 91,000 ರೂ.ಗೆ ಜಿಗಿದಿದೆ. ಬೆಂಗಳೂರಿನಲ್ಲಿ 24 ಕ್ಯಾರಟ್‌ನ ಪ್ರತಿ ಗ್ರಾಮ್ ಬಂಗಾರದ ದರ 9,284 ರುಪಾಯಿಗೆ ಏರಿಕೆಯಾಗಿದೆ.

ಹಾಗಾದರೆ ನಿರಂತರವಾಗಿ ಬಂಗಾರದ ದರ ಏರುತ್ತಿರುವುದು ಏಕೆ? ಇದಕ್ಕೆ ಮೊದಲ ಕಾರಣ ಜಾಗತಿಕ ಆರ್ಥಿಕ ಪರಿಸ್ಥಿತಿಯ ಅನಿಶ್ಚಿತತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಘೋಷಿಸಿರುವ ಟಾರಿಫ್ ವಾರ್ ಜತೆಗೆ ಹಣದುಬ್ಬರ ಕೂಡ ಪ್ರಭಾವ ಬೀರಿದೆ. ನಾನಾ ದೇಶಗಳ ಸೆಂಟ್ರಲ್ ಬ್ಯಾಂಕ್‌ಗಳು ಕೂಡ ಬಂಗಾರದ ಖರೀದಿಯನ್ನು ಹೆಚ್ಚಿಸಿವೆ. ವಿಶ್ಲೇಷಕರ ಪ್ರಕಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ದರ ಪ್ರತಿ ಔನ್ಸಿಗೆ 3,500 ಡಾಲರ್ ಮಟ್ಟಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ.