(ನ್ಯೂಸ್ ಕಡಬ) newskadaba.com , ಏ.03: ಬೆಳ್ತಂಗಡಿಯ ಬೆಳಾಲು ಗ್ರಾಮದ ಕಾಡಿನಲ್ಲಿ 3 ತಿಂಗಳ ಹೆಣ್ಣು ಮಗುವೊಂದು ಪತ್ತೆಯಾದ ಪ್ರಕರಣಕ್ಕೆ ರೋಚಕ ತಿರುವು ಲಭಿಸಿದೆ. ಮಗು ಬೆಳಾಲು ನಿವಾಸಿಯದ್ದು ಎಂಬುವುದು ಬಹಿರಂಗಗೊಂಡಿದೆ. ಇದೀಗ ಪ್ರಕರಣದಲ್ಲಿ ಮಗುವಿನ ಪೋಷಕರನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯ ನಿವಾಸಿ ತಿಮ್ಮಪ್ಪ ಗೌಡರ ಮಗ ಧರ್ಮಸ್ಥಳದಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ ರಂಜಿತ್ ಗೌಡ (27) ಮತ್ತು ಧರ್ಮಸ್ಥಳ ಗ್ರಾಮದ ಕೊಲಂಗಾಜೆಯ ಸುಶ್ಮಿತಾ ಪತ್ತೆಯಾದ ಮಗುವಿನ ತಂದೆ-ತಾಯಿ ಎಂದು ತಿಳಿದು ಬಂದಿದ್ದು, ಇದೀಗ ರಂಜಿತ್ ಗಂಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ.