(ನ್ಯೂಸ್ ಕಡಬ) newskadaba.com , ಏ.03: ಬೆಂಗಳೂರು : ರಾಜ್ಯದಲ್ಲಿ ನೀರು, ವಿದ್ಯುತ್, ಹಾಲು, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬುಧವಾರ ಬಿಜೆಪಿ ನಾಯಕರು ಸರಕಾರದ ವಿರುದ್ಧ ಅಹೋರಾತ್ರಿ ಹೋರಾಟಕ್ಕೆ ಚಾಲನೆ ನೀಡಿದ್ದರು. ಇಂದು ಸಿಎಂ ಮನೆ ಮುತ್ತಿಗೆ ಹಾಕಲು ನಿರ್ಧರಿಸಿ, ಸಿಎಂ ಮನೆ ಕಡೆ ತೆರಳಲು ಮುಂದಾದರು. ಅಷ್ಟರಲ್ಲೇ ಬ್ಯಾರಿಕೇಡ್ ಹಾಕಿದ ಪೊಲೀಸರು, ಬಿಜೆಪಿ ಕಾರ್ಯಕರ್ತರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ನೂಕಾಟ ನಡೆಯಿತು.ಈ ವೇಳೆ ಪೊಲೀಸರು ಹಲವರನ್ನು ವಶಕ್ಕೆ ಪಡೆದರು.