ರಾಜ್ಯಸಭೆಯಲ್ಲೂ ವಕ್ಫ್ ಮಸೂದೆ ಮಂಡನೆ

(ನ್ಯೂಸ್ ಕಡಬ) newskadaba.com, ಎ.04 : ರಾಜ್ಯಸಭೆಯಲ್ಲಿ ಚರ್ಚೆಯ ಬಳಿಕ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆಯುವಲ್ಲಿ ಎನ್​ಡಿಎ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ. ಗುರುವಾರ ತಡರಾತ್ರಿ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಯಿತು. ಮಸೂದೆಯ ಪರವಾಗಿ 138 ಮತಗಳು ಮತ್ತು ವಿರುದ್ಧವಾಗಿ 95 ಮತಗಳು ಚಲಾವಣೆಯಾಗಿ ಬೆಂಬಲ ದೊರೆತವು.

ಇನ್ನು ಮಸೂದೆಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುತ್ತದೆ ಮತ್ತು ಅವರು ಸಹಿ ಹಾಕಿದ ತಕ್ಷಣ ಕಾನೂನಿನ ರೂಪವನ್ನು ಪಡೆಯುತ್ತದೆ ಎಂದು ಹೇಳಲಾಗಿದೆ. ಸರ್ಕಾರವು ಬುಧವಾರ ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿತ್ತು. ಅಲ್ಲಿ, ಸುಮಾರು 12 ಗಂಟೆಗಳ ಚರ್ಚೆಯ ನಂತರ, ಸರ್ಕಾರವು ಮಸೂದೆ ಅಂಗೀಕರಿಸುವಲ್ಲಿ ಯಶಸ್ವಿಯಾಗಿತ್ತು. ಲೋಕಸಭೆಯಲ್ಲಿ ಈ ಮಸೂದೆಯ ಪರವಾಗಿ 288 ಮತಗಳು ಮತ್ತು ವಿರುದ್ಧವಾಗಿ 232 ಮತಗಳು ಚಲಾವಣೆಯಾಗಿದ್ದವು. ಇದೀಗ ರಾಜ್ಯಸಭೆಯಲ್ಲೂ ಅನುಮೋದನೆಗೊಂಡಿದ್ದು ಕಾನೂನು ರೂಪ ಪಡೆಯಲು ಒಂದು ಹೆಜ್ಜೆ ಮಾತ್ರ ಬಾಕಿ ಉಳಿದಿವೆ.

Also Read  ಹಾಡಹಗಲೇ ಮನೆ ಕಳ್ಳತನ- 3 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು

error: Content is protected !!
Scroll to Top