ವಕ್ಫ್ ತಿದ್ದುಪಡಿ ಕಾಯ್ದೆ -2024 ಅನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಮುಂದಾದ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com, ಎ.04  ಬೆಂಗಳೂರು: ಸಂಸತ್ತಿನ ಉಭಯ ಸದನಗಳಲ್ಲಿ ಬಹುಮತದಿಂದ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಕಾಯ್ದೆ -2024 ಅನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಕಾಂಗ್ರೆಸ್ ಮುಂದಾಗಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಹಾಗೂ ರಾಜ್ಯಸಭಾ ಸದಸ್ಯ, ಜೈರಾಮ್ ರಮೇಶ್, ಕಾಂಗ್ರೆಸ್ ಸುಪ್ರೀಂಕೋರ್ಟ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ- 2024ರ ಸಾಂವಿಧಾನಿಕತೆಯನ್ನು ಪ್ರಶ್ನಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಭಾರತದ ಸಂವಿಧಾನದಲ್ಲಿ ಒಳಗೊಂಡಿರುವ ತತ್ವಗಳು, ನಿಬಂಧನೆಗಳು ಮತ್ತು ಆಚರಣೆಗಳ ಮೇಲೆ ಮೋದಿ ಸರಕಾರದ ಎಲ್ಲಾ ದಾಳಿಗಳನ್ನು ವಿರೋಧಿಸುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.

error: Content is protected !!