(ನ್ಯೂಸ್ ಕಡಬ) newskadaba.com, ಎ.04 ಬೆಂಗಳೂರು: ಪೂರ್ವ ಮುಂಗಾರು ಮಳೆ ಚೇತರಿಕೆ ಕಂಡಿದ್ದು, ನಿನ್ನೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ. ಕೆಲವೆಡೆ ಸಾಧಾರಣ ಮಳೆಯಾಗಿದ್ದರೆ, ಕೆಲವೆಡೆ ಭಾರಿ ಮಳೆಯಾಗಿದೆ.
ಗಾಳಿ, ಮಳೆಗೆ ಬೆಂಗಳೂರು ಸೇರಿದಂತೆ ಕೆಲವೆಡೆ ಮರ, ವಿದ್ಯುತ್ ಕಂಬಗಳು ಮುರಿದು ಬಿದ್ದು, ಕೆಲ ಕಾಲ ಸಾರ್ವಜನಿಕರಿಗೆ ತೊಂದರೆ ಉಂಟಾಗಿತ್ತು. ಹಾಸನ, ದಕ್ಷಿಣ ಕನ್ನಡ, ಬೆಂಗಳೂರು, ಚಿತ್ರದುರ್ಗ, ಬಾಗಲಕೋಟೆ, ವಿಜಯಪುರ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಕೆಲವೆಡೆ ಚದುರಿದಂತೆ ಮತ್ತೆ ಕೆಲವೆಡೆ ಭಾಗಶಃ ವ್ಯಾಪಕ ಮಳೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ ಬೆಳಿಗ್ಗೆ ಹಾಗೂ ಮಧ್ಯಾಹ್ನ ಮಳೆಯಾಗಿದೆ. ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಬಿಟಿಎಂ ಲೇಔಟ್, ಬಸವನಗುಡಿ, ಜಯನಗರ, ನಾಯಂಡಹಳ್ಳಿ, ರಾಜಾಜಿನಗರ, ಬೊಮ್ಮನಹಳ್ಳಿ, ಗಾಂಧಿನಗರ, ಶಿವಾಜಿನಗರ ಸೇರಿದಂತೆ ಬಹಳಷ್ಟು ಬಡಾವಣೆಗಳಲ್ಲಿ ಮಳೆಯಾಗಿತ್ತು.
