(ನ್ಯೂಸ್ ಕಡಬ) newskadaba.com, ಎ.04 ಬೆಂಗಳೂರು: ಬ್ರಹ್ಮಾವರ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ಮಾಬುಕಳ ಸೇತುವೆ ಸಮೀಪ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊರ್ವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮಮ್ತಾಜ್ (44) ಎಂದು ಗುರುತಿಸಲಾಗಿದೆ.
ಗುರುವಾರ ಸಂಜೆ ಮಾಬುಕಳ ಸೇತುವೆ ಸಮೀಪ ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸಹ ಸವಾರೆ ಬಾರ್ಕೂರು ಮೂಲದ ಪೂರ್ಣಿಮಾ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.