(ನ್ಯೂಸ್ ಕಡಬ) newskadaba.com, ಎ.04 : ತಮಿಳುನಾಡು ಬಿಜೆಪಿಯಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಇದೀಗ ಮಹತ್ವದ ಬೆಳವಣಿಗೆಯಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ರೇಸ್‌ನಿಂದ ಹಿಂದೆಯ ಸರಿಯಲು ಅಣ್ಣಾಮಲೈ ನಿರ್ಧರಿಸಿದ್ದಾರೆ. ಶೀಘ್ರದಲ್ಲೇ ಅಣ್ಣಾಮಲೈ ಹಾಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಎರಡು ವಾರದಲ್ಲಿ ತಮಿಳುನಾಡಿಗೆ ಹೊಸ ಬಿಜೆಪಿ ಅಧ್ಯಕ್ಷರ ಆಯ್ಕೆ ನಡೆಯಲಿದೆ. ಅಣ್ಣಾಮಲೈ ರಾಜೀನಾಮೆ ನಿರ್ಧಾರಕ್ಕೆ ಕೆಲ ಪ್ರಮುಖ ಕಾರಣಗಳು ಬಹಿರಂಗವಾಗಿದೆ. ಎಐಎಡಿಎಂಕೆ ಷರತ್ತಿನಿಂದ ಅಣ್ಣಾಮಲೈ ರಾಜೀನಾಮೆಗೆ ಮುಂಜಾಗಿದ್ದಾರೆ ಅನ್ನೋ ಮಾಹಿತಿಗಳು ಬಹಿರಂಗವಾಗಿದೆ.

ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದಾಗಿ ಅಣ್ಣಾಮಲೈ ಖಚಿತಪಡಿಸಿದ್ದಾರೆ. ಇಷ್ಟೇ ಅಲ್ಲ ಹೊಸ ಅಧ್ಯಕ್ಷರನ್ನು ಪಕ್ಷ ಒಗ್ಗಟ್ಟಾಗಿ ನೇಮಕ ಮಾಡಲಿದೆ ಎಂದಿದ್ದಾರೆ. ಬಿಜೆಪಿ ಹೈಕಮಾಂಡ್ ಮುಂದಿನ ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನು ಆಯ್ಕೆ ಮಾಡಲಿದೆ ಎಂದು ಅಣ್ಮಾಮಲೈ ಸ್ಪಷ್ಟಪಡಿಸಿದ್ದಾರೆ.