(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ. 20. ಕಾರು ಹಾಗೂ ಆಟೋ ರಿಕ್ಷಾದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ವಾಲ್ತಾಜೆ ಎಂಬಲ್ಲಿ ಸಂಭವಿಸಿದೆ.
ಮೃತ ಚಾಲಕನನ್ನು ಗುಂಡ್ಯದ ಪ್ರಭಾಕರ್ ಎಂದು ತಿಳಿದುಬಂದಿದ್ದು, ಗುಂಡ್ಯದಿಂದ ನೆಲ್ಯಾಡಿ ಕಡೆಗೆ ಆಟೋರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದಕಾರು ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.