(ನ್ಯೂಸ್ ಕಡಬ) newskadaba.com ಎ. 28: ಕಾಶ್ಮೀರದ ಪಹಲ್ಗಾಮ್‌ಗೆ ಪ್ರವಾಸಕ್ಕೆ ಹೋಗಿದ್ದ ವೇಳೆ ಇಸ್ಲಾಮಿಕ್ ಉಗ್ರರ ಗುಂಡೇಟಿಗೆ ಬಲಿಯಾದ ಕನ್ನಡಿಗರಾದ ಬೆಂಗಳೂರಿನ ಭರತ್ ಭೂಷಣ್ ಹಾಗೂ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುವುದು.


ಜೊತೆಗೆ, ಅವರ ಕುಟುಂಬಕ್ಕೆ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಮುಂದುವರೆದು, ಭರತ್ ಭೂಷಣ್ ಅವರ ಕುಟುಂಬಕ್ಕೆ ಬೆಂಗಳೂರಿನ ಜನರಿಂದ ಸಂಗ್ರಹಿಸಲಾದ 10 ಲಕ್ಷ ರೂ. ಹಣ ನೆರವು ನೀಡಲಾಗುವುದು ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.