ಮಹಮ್ಮದ್ ಪೈಗಂಬರ್ ವಿರುದ್ಧ ಹೇಳಿಕೆ: ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹ, ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಎ. 29 ವಿಜಯಪುರ: ಪ್ರವಾದಿ ಮಹಮ್ಮದ್ ಪೈಗಂಬರ್ ಅವಕ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ಸೋಮವಾರ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು, ಸಾರ್ವಜನಿಕ ಕ್ಷಮೆಯಾಚಿಸುವಂತೆ ಆಗ್ರಹಿಸಿದೆ.

ನಗರದ ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಸಾವಿರಾರು ಪ್ರತಿಭಟನಾಕಾರರು, ಯತ್ನಾಳ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಲ್ಲಿ ಸಚಿವ ಶಿವಾನಂದ ಪಾಟೀಲ್, ಶಾಸಕರಾದ ಯಶ್ವಂತ್‌ರಾಯಗೌಡ ಪಾಟೀಲ್, ಅಶೋಕ್ ಮನಗೂಳಿ, ವಿಠಲ ಕಟಕದೊಂಡ ಮತ್ತು ಪ್ರಮುಖ ಮುಸ್ಲಿಂ ನಾಯಕರು ಭಾಗವಹಿಸಿದ್ದರು.

Also Read  ಗುಡ್ಡ ಕುಸಿದು ಇಬ್ಬರು ಮಕ್ಕಳ ಮೃತ್ಯು ಪ್ರಕರಣ ➤ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ವಿತರಣೆ

ಪ್ರತಿಭಟನೆ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕರು ಯತ್ನಾಳ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದರು. ಯತ್ನಾಳ್ ಅವರ ಹೇಳಿಗೆ ಅಸಂಬದ್ಧ, ಕೋಮು ಸೌಹಾರ್ದತೆಯನ್ನು ನಾಶಪಡಿಸರುವ ಮತ್ತು ಮುಸ್ಲಿಮರ ಧಾರ್ಮಿಕ ಭಾವನೆಗಳನ್ನು ಅವಮಾನಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.

error: Content is protected !!
Scroll to Top