ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜಮ್ಮು ಮತ್ತು ಕಾಶ್ಮೀರದ 48 ಪ್ರಮುಖ ಪ್ರವಾಸಿ ತಾಣಗಳು ತಾತ್ಕಾಲಿಕ ಬಂದ್ – News Kadaba

ಜಮ್ಮು ಮತ್ತು ಕಾಶ್ಮೀರದ 48 ಪ್ರಮುಖ ಪ್ರವಾಸಿ ತಾಣಗಳು ತಾತ್ಕಾಲಿಕ ಬಂದ್

(ನ್ಯೂಸ್ ಕಡಬ) newskadaba.com ಎ. 29:  ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಕೇಂದ್ರಾಡಳಿತ ಪ್ರದೇಶದ 87 ಪ್ರವಾಸಿ ತಾಣಗಳ ಪೈಕಿ 48 ಪ್ರವಾಸಿ ತಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ.

ಇತ್ತೀಚೆಗೆ ನಡೆದ ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಯೂಸ್ಮಾರ್ಗ್, ತೌಸಿಮೈದನ್, ದೂದ್ಪತ್ರಿ, ಬಂಗುಸ್, ಕರಿವಾನ್ ಡೈವರ್ ಚಂಡಿಗಮ್, ಅಹರ್ಬಲ್, ಕೌಸರ್ನಾಗ್, ವುಲರ್/ವಾಟ್ಲಾಬ್, ರಾಮ್ಪೋರಾ ಬಂಗುಸ್ ವ್ಯಾಲಿ, ರಾಜ್ಪೋರಾ ಮತ್ತು ಚೀರ್‌ಹಾರ್ ಮುಚ್ಚಲು ನಿರ್ಧರಿಸಲಾಗಿದೆ. ಇನ್ನು ತೆರೆದಿರುವ ತಾಣಗಳಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗುತ್ತದೆ ಎನ್ನಲಾಗಿದೆ. ವಾರದ ಹಿಂದಷ್ಟೇ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು. ಈ ದಾಳಿಯ ಹೊಣೆಯನ್ನು ಲಷ್ಕರ್ -ಎ- ತೊಯ್ಬಾದ ದಿ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿತ್ತು. ಇದರ ವಿರುದ್ಧ ಆಕ್ರೋಶ ವ್ಯಕ್ತವಾದ ಬಳಿಕ ನಮ್ಮ ಖಾತೆಯನ್ನು ಯಾರೋ ಹ್ಯಾಕ್ ಮಾಡಿದ್ದಾರೆ. ನಮಗೂ ದಾಳಿಗೂ ಸಂಬಂಧವಿಲ್ಲ ಎಂದು ಹೇಳಿತ್ತು.

Scroll to Top