ಭಾರತ-ಪಾಕ್‌ ನಡುವಿನ ಮಾತುಕತೆಗೆ ನೆರವು ; ವಿಶ್ವಸಂಸ್ಥೆ ಮುಖ್ಯಸ್ಥ ಗುಟೇರಸ್‌‍

(ನ್ಯೂಸ್ ಕಡಬ) newskadaba.com ಎ. 29:  ಭಾರತ ಮತ್ತು ಪಾಕಿಸ್ತಾನದ ನಡುವಿನ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್‌‍ ಅವರು ಉಭಯ ರಾಷ್ಟ್ರಗಳ ನಡುವಿನ ಶಾಂತಿ ಮಾತುಕತೆಗೆ ನಾವು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಘೋಷಿಸಿದ್ದಾರೆ.

ಪ್ರಧಾನ ಕಾರ್ಯದರ್ಶಿ ಗುಟೇರಸ್‌‍ ಅವರು, ಭಾರತ ಮತ್ತು ಪಾಕಿಸ್ತಾನದ ನಡುವಿನ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಗರಿಷ್ಠ ಸಂಯಮವನ್ನು ಕಾಪಾಡಿಕೊಳ್ಳಲು ಮತ್ತು ಯಾವುದೇ ಉಲ್ಬಣವನ್ನು ತಪ್ಪಿಸಲು ಅವರು ಎರಡೂ ಸರ್ಕಾರಗಳನ್ನು ಬಲವಾಗಿ ಒತ್ತಾಯಿಸುತ್ತಾರೆ ಎಂದು ಅವರ ವಕ್ತಾರರ ಕಚೇರಿಯ ಹೇಳಿಕೆ ತಿಳಿಸಿದೆ.

error: Content is protected !!
Scroll to Top