ಕಾರಿನ ಟೈರ್‌ ಸ್ಪೋಟಗೊಂಡು ಡಿವೈಡರ್‌ಗೆ ಡಿಕ್ಕಿ , ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ಮೂವರ ಸಾವು



(ನ್ಯೂಸ್ ಕಡಬ) newskadaba.com ಮೇ.01: ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ಇನ್ನೋವಾ ಕಾರಿನ ಟೈರ್‌ ಸ್ಪೋಟಗೊಂಡು ಚಾಲಕನ ನಿಯಂತ್ರೆಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಮೂವರು ಸಾವನಪ್ಪದ್ದು, 6 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಕಾತ್ರಾಳ್‌ ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ.







ಮೃತರನ್ನು ತಮಿಳುನಾಡಿನ ಅರ್ಜುನ್‌ (28), ಶರವಣ (31), ಸೇಂದಿಲ್‌ (29) ಎಂದು ಗುರುತಿಸಲಾಗಿದೆ. ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಇಂದು ಬೆಳಿಗ್ಗೆ 6.30 ರ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.






ಡಿಕ್ಕಿಯ ರಭಸಕ್ಕೆ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಅಪಘಾತದಲ್ಲಿ ಗಾಯಗೊಂಡಿರುವ ಮೂವರನ್ನು ಬೆಂಗಳೂರಿನ ಆಸ್ಪತ್ರೆಗೂ, ಉಳಿದ ಮೂವರನ್ನು ಚಿತ್ರದುರ್ಗ ಆಸ್ಪತೆಗೂ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

error: Content is protected !!
Scroll to Top