ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಮೇ.01: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮುಕ್ತಾಯಗೊಂಡು, ಇದೀಗ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಲಭ್ಯವಾಗಲಿದೆ. https://karresults.nic.in/ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://kseab.karnataka.gov.in/ ಅಥವಾ https://karresults.nic.in/ನಲ್ಲಿ ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.

Also Read  ಸಾಗರ ಮಾಲಾ ಯೋಜನೆ ವಿರೋಧಿಸಿ ಇಂದು ಕಾರವಾರ ಬಂದ್

ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನಡೆಸಲಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ.

error: Content is protected !!
Scroll to Top