(ನ್ಯೂಸ್ ಕಡಬ) newskadaba.com, ಮೇ.03. ಮಂಗಳೂರು:

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಪದವು ಬಳಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಸಂಬಂಧವಾಗಿ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಕೆಲವು ವ್ಯಕ್ತಿಗಳು ಹಾಗೂ ಗ್ರೂಪುಗಳು ಸಾಮಾಜಿಕ ಮಾಧ್ಯಮದ ಮೂಲಕ ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ದ್ವೇಷ ಭಾವನೆ ಹುಟ್ಟುವಂತೆ ಪೋಸ್ಟ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ ಠಾಣೆಗಳಲ್ಲಿ ಕೆಳಗಿನಂತೆ ಪ್ರಕರಣಗಳನ್ನುದಾಖಲಿಸಿದೆ.