(ನ್ಯೂಸ್ ಕಡಬ) newskadaba.com ಕಡಬ, ಎ.01. ಮೆಸ್ಕಾಂ ಉದ್ಯೋಗಿಯೊಬ್ಬರು ಕರ್ತವ್ಯದಲ್ಲಿರುವಾಗಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಭಾನುವಾರದಂದು ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಮೆಸ್ಕಾಂ ಕಛೇರಿಯಲ್ಲಿ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಡಬ ಸಮೀಪದ ಕೋಡಿಂಬಾಳ ಗ್ರಾಮದ ಕೊಡೆಂಕೀರಿ ನಿವಾಸಿ ದಿ| ಸಾಂತಪ್ಪ ಗೌಡ ಎಂಬವರ ಪುತ್ರ ಚಂದ್ರಶೇಖರ್(52) ಭಾನುವಾರದಂದು ಕರ್ತವ್ಯದಲ್ಲಿರುವಾಗಲೇ ಹೃದಯಾಘಾತಕ್ಕೊಳಗಾಗಿದ್ದು, ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.