ಕಡಬ: ಹೃದಯಾಘಾತಕ್ಕೊಳಗಾದ ಮೆಸ್ಕಾಂ ಉದ್ಯೋಗಿ ► ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಎ.01. ಮೆಸ್ಕಾಂ ಉದ್ಯೋಗಿಯೊಬ್ಬರು ಕರ್ತವ್ಯದಲ್ಲಿರುವಾಗಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಭಾನುವಾರದಂದು ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಸುಬ್ರಹ್ಮಣ್ಯ ಮೆಸ್ಕಾಂ ಕಛೇರಿಯಲ್ಲಿ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಡಬ ಸಮೀಪದ ಕೋಡಿಂಬಾಳ ಗ್ರಾಮದ ಕೊಡೆಂಕೀರಿ ನಿವಾಸಿ ದಿ| ಸಾಂತಪ್ಪ ಗೌಡ ಎಂಬವರ ಪುತ್ರ ಚಂದ್ರಶೇಖರ್(52) ಭಾನುವಾರದಂದು ಕರ್ತವ್ಯದಲ್ಲಿರುವಾಗಲೇ ಹೃದಯಾಘಾತಕ್ಕೊಳಗಾಗಿದ್ದು, ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Scroll to Top