(ನ್ಯೂಸ್ ಕಡಬ) newskadaba.com, ಮೇ.03. ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಬಜಪೆ ಠಾಣೆ ಪೊಲೀಸರು ಘಟನೆ ನಡೆದ 24 ಗಂಟೆಯೊಳಗೆ 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳ ಪತ್ತೆಗಾಗಿ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ರವರು ಐದು ತಂಡಗಳನ್ನು ರಚಿಸಿದ್ದರು. ಈ ತಂಡಗಳು ಘಟನೆ ನಡೆದ ದಿನದಿಂದ ಇದುವರೆಗೂ ಹಲವು ಮಾತಿಗಳನ್ನು ಕಲೆಹಾಕಿ ಮಂಗಳೂರಿನಲ್ಲೇ ಅವಿತು ಕುಳಿತಿದ್ದ ಎಂಟು ಮಂದಿ ಶಂಕಿತರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿವೆ.
ಸುಹಾಸ್ ಶೆಟ್ಟಿಯನ್ನು ಏತಕ್ಕಾಗಿ ಕೊಲೆ ಮಾಡಿದ್ದಾರೆ, ಈ ಘಟನೆ ಹಿಂದೆ ಯಾರಿದ್ದಾರೆ, ಎಂಬಿತ್ಯಾದಿ ಮಾಹಿತಿಗಳನ್ನು ಆರೋಪಿಗಳಿಂದ ಬಾಯ್ದಿಡಿಸುತ್ತಿದ್ದಾರೆ. 2022 ರಲ್ಲಿ ನಡೆದಿದ್ದ ಫಾಜಿಲ್ ಕೊಲೆಗೆ ಪ್ರತಿಕಾರವಾಗಿ ಸುಹಾಸ್ ಕೊಲೆ ನಡೆಯಿತೇ ಅಥವಾ ಬೇರೆ ಏನಾದರೂ ಕಾರಣ ಇದೆಯೇ ಎಂಬ ಬಗ್ಗೆಯೂ ಪೊಲೀಸರು ಮಾಹಿತಿಗಳನ್ನು ಕಲೆಹಾಕುತ್ತಿದ್ದು, ತನಿಖೆ ನಂತರವಷ್ಟೇ ಈತನ ಕೊಲೆಗೆ ನಿಖರ ಕಾರಣ ಬಯಲಾಗಬೇಕಿದೆ.