(ನ್ಯೂಸ್ ಕಡಬ) newskadaba.com, ಮೇ.03. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಒಟ್ಟು 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾವುದೇ ಕಾರಣಕ್ಕೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಶಾಂತಿ ಕದಡುವುದಕ್ಕೆ ಬಿಡುವುದಿಲ್ಲ. ಯಾವುದೇ ಸಮುದಾಯದ ಕೋಮುವಾದಿಗಳಿಗೂ ಕಾನೂನು ಉಲ್ಲಂಘಿಸಲು ಬಿಡಲ್ಲ.
ಇಂಥಹ ಘಟನೆ ಮರುಕಳಿಸಬಾರದು ಎಂಬ ಕಾರಣಕ್ಕೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚಿಸಲಾಗುವುದು. ಇದು ಆ್ಯಂಟಿ ನಕ್ಸಲ್ ಪಡೆಯ ರೀತಿಯಲ್ಲೇ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.