‘ಭಾರತಕ್ಕೆ ಹಾನಿ ಮಾಡುವ ಮುನ್ನ ಪಾಕ್ 100 ಬಾರಿ ಯೋಚಿಸಬೇಕು ‘- ಓವೈಸಿ

(ನ್ಯೂಸ್ ಕಡಬ) newskadaba.com, ಮೇ.05: ಭಾರತಕ್ಕೆ ಹಾನಿ ಮಾಡುವ ಮುನ್ನ ಪಾಕಿಸ್ತಾನ 100 ಬಾರಿ ಯೋಚಿಸಬೇಕು ಅಂತಾ ಕ್ರಮ ಕೈಗೊಳ್ಳಿ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ. ಅಲ್ಲದೇ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡ ಓವೈಸಿ ಭಯೋತ್ಪಾದನೆಯನ್ನು ಉತ್ತೇಜಿಸುವ ವಿಫಲ ರಾಷ್ಟ್ರ ಎಂದು ಕರೆದಿದ್ದಾರೆ.

ಭಾರತದ ಮೇಲೆ ಮತ್ತೊಮ್ಮೆ ದಾಳಿ ಮಾಡುವ ಮೊದಲು ಪಾಕಿಸ್ತಾನ ‘ನೂರು ಬಾರಿ ಯೋಚಿಸುವಂತೆ’ ಪ್ರಧಾನಿ ನರೇಂದ್ರ ಮೋದಿ ಅವರು ಬಲವಾದ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.

Also Read  ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ➤ ಹವಮಾನ ಇಲಾಖೆ ಮುನ್ಸೂಚನೆ

ಭಯೋತ್ಪಾದಕ ದಾಳಿ ನಡೆಸಿದ್ದು ನಾವೇ ಎಂಬುದಕ್ಕೆ ಭಾರತ ಪುರಾವೆ ಕೊಡಲಿ, ಭಾರತವು ಪಾಕಿಸ್ತಾನದಲ್ಲಿ ಭಯೋತ್ಪಾದಕತೆ ಹರಡುತ್ತಿದೆ ಎಂಬುದಕ್ಕೆ ನಮ್ಮ ಬಳಿ ಸಾಕ್ಷ್ಯಗಳಿವೆ ಎಂದು ಪಾಕಿಸ್ತಾನ ಹೇಳಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸುವ ಓವೈಸಿ ಪಾಕಿಸ್ತಾನ ನಾಚಿಕೆಯಿಲ್ಲದೆ ಪುರಾವೆ ಕೇಳುತ್ತಿದೆ ಎಂದರು.

error: Content is protected !!
Scroll to Top