(ನ್ಯೂಸ್ ಕಡಬ) newskadaba.com, ಮೇ.05: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಗೆ ಸಂಬಂಧಪಟ್ಟಂತೆ ವಿಚಾರಣೆಗೆಂದು ಕರೆದೊಯ್ದಿದ್ದ ಶಂಕಿತ ಆರೋಪಿಯ ಶವ ನದಿ ದಂಡೆಯಲ್ಲಿ ಪತ್ತೆಯಾಗಿದ್ದು, ತನಿಖೆ ನಡೆಸುವಂತೆ ಆದೇಶಿಸಲಾಗಿದೆ.

ಪಹಲ್ಗಾಮ್ ದಾಳಿ ಸಂಬಂಧ ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ದಾಳಿಗೆ ಸಂಬಂಧಿಸಿದಂತೆ ಶಂಕಿತನನ್ನು ವಶಕ್ಕೆ ಪಡೆದು ಭಯೋತ್ಪಾದಕರ ಅಡಗುತಾಣಗಳನ್ನು ಪತ್ತೆಹಚ್ಚಲು ಕರೆದೊಯ್ಯಲಾಗಿತ್ತು. ಈ ವೇಳೆ ಆರೋಪಿ ಇಮ್ತಿಯಾಜ್ ಅಹ್ಮದ್ ಮ್ಯಾಗ್ರೆ ಹೊಳೆಗೆ ಹಾರಿ ಮೃತಪಟ್ಟಿದ್ದಾನೆ. ಈತ ತಾನು ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶಂಕಿತನ ಮೃತದೇಹವು ನದಿಯಲ್ಲಿ ಪತ್ತೆಯಾದ ಕೆಲವೇ ಗಂಟೆಗಳಲ್ಲಿ ಯುವಕನೊಬ್ಬ ಹರಿಯುವ ಹೊಳೆಗೆ ಹಾರಿ ಕೊಚ್ಚಿ ಹೋಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಯುವಕ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳುವುದನ್ನು, ಬಳಿಕ ಆತ ನದಿಗೆ ಹಾರಿ ಕೊಚ್ಚಿ ಹೋಗುವುದನ್ನು ಕಾಣಬಹುದಾಗಿದೆ.